ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಇಡಿ ವಲಯದ ಜಂಟಿ ನಿರ್ದೇಶಕ ರಮಣ ಗುಪ್ತ ವರ್ಗಾವಣೆ

ಬೆಂಗಳೂರು: ಬೆಂಗಳೂರು ಇಡಿ ವಲಯದ ಜಂಟಿ ನಿರ್ದೇಶಕ ರಮಣ ಗುಪ್ತ ವರ್ಗಾವಣೆ ಮಾಡಿ ನೂತನ ಜಂಟಿ ನಿರ್ದೇಶಕರಾಗಿ ಮನೀಷ್ ಗೋದಾರ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆ ಮಾಡಲಾಗಿದೆ. ಮೂವರು ವಲಯ ಜಂಟಿ ಆಯುಕ್ತರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅದರಂತೆ, ಯಲಹಂಕ ವಲಯ ಜಂಟಿ ಆಯುಕ್ತ ಡಾ.ಡಿ. ಆರ್ ಅಶೋಕ್, ಪೂರ್ವ ವಲಯ ಜಂಟಿ ಆಯುಕ್ತೆ ಕೆ.ಆರ್. ಪಲ್ಲವಿ, ದಕ್ಷಿಣ ವಲಯ ಜಂಟಿ ಆಯುಕ್ತ ವೀರಭದ್ರಸ್ವಾಮಿ ವರ್ಗಾವಣೆ ಮಾಡಲಾಗಿದೆ.

ಕೆ.ಆರ್. ಪಲ್ಲವಿ, ವೀರಭದ್ರಸ್ವಾಮಿ ಮಾತೃ ಇಲಾಖೆಗೆ ವಾಪಸ್ ಆಗಿದ್ದಾರೆ. ಪೌರಾಡಳಿತ ಇಲಾಖೆಗೆ ಕೆ.ಆರ್. ಪಲ್ಲವಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ವೀರಭದ್ರಸ್ವಾಮಿ ವಾಪಸ್ ಆಗಿದ್ದಾರೆ. ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತರಾಗಿ ಆರ್. ಶಿಲ್ಪಾ, ಯಲಹಂಕ ವಲಯ ಜಂಟಿ ಆಯುಕ್ತರಾಗಿ ಪಿ.ವಿ. ಪೂರ್ಣಿಮಾ, ದಕ್ಷಿಣ ವಲಯ ಜಂಟಿ ಆಯುಕ್ತರಾಗಿ ಡಾ. ಜಗದೀಶ್ ನಾಯಕ್ ನೇಮಕಗೊಂಡಿದ್ದಾರೆ.

Edited By : Nirmala Aralikatti
PublicNext

PublicNext

04/11/2021 08:56 pm

Cinque Terre

58.14 K

Cinque Terre

0

ಸಂಬಂಧಿತ ಸುದ್ದಿ