ಬೆಂಗಳೂರು: ಉತ್ತರ ಕನ್ನಡ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಹಾವೇರಿ, ಬಾಗಲಕೋಟೆ ಜಿಲ್ಲೆಗಳನ್ನ ಈ ಹಿಂದೆ ಮುಂಬೈ ಕರ್ನಾಟಕ ಎಂದು ಕರೆಯಲಾಗಿತ್ತು. ಇದೀಗ ಮುಂಬೈ ಕರ್ನಾಟಕದ ಹೆಸರು ಬದಲಾವಣೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಹೌದು. ಹೈದರಾಬಾದ್-ಕರ್ನಾಟಕ ಭಾಗವನ್ನು 'ಕಲ್ಯಾಣ ಕರ್ನಾಟಕ'ವಾಗಿ ಮರುನಾಮಕರಣ ಮಾಡಿದ ರೀತಿಯಲ್ಲಿಯೇ ಉತ್ತರ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು 'ಕಿತ್ತೂರು ಕರ್ನಾಟಕ' ಎಂದು ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಾಧುಸ್ವಾಮಿ, ಮುಂಬೈ ಕರ್ನಾಟಕವನ್ನು ಇನ್ಮುಂದೆ 'ಕಿತ್ತೂರು ಕರ್ನಾಟಕ'ವೆಂದು ಹೊಸ ನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಬಿಟ್ ಕಾಯಿನ್ ಹ್ಯಾಕ್ ಬಗ್ಗೆ ವಿಚಾರ ಚರ್ಚೆಯಾಗಿಲ್ಲ. ಚರ್ಚಿಸಲು ನಮ್ಮ ಮುಂದೆ ಯಾವುದೇ ವಿಷಯವಿಲ್ಲ. ಎಲ್ಲಾ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚಿಸಲು ಬರಲ್ಲ. ಬಿಟ್ ಕಾಯಿನ್ ಹ್ಯಾಕ್ ಬಗ್ಗೆ ಇ.ಡಿ ತನಿಖೆಗೆ ವಹಿಸಿರುವ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.
PublicNext
08/11/2021 08:50 pm