ನವದೆಹಲಿ: ಬಾಲಾಕೋಟ್ ವೈಮಾನಿಕ ಸರ್ಜಿಕಲ್ ಸ್ಟ್ರೈಕ್ ನಂತರದ ಘಟನೆಯಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಇಂದು 'ವೀರ ಚಕ್ರ' ಪಶಸ್ತಿ ಪ್ರದಾನ ಮಾಡಲಾಯಿತು.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಪ್ರಶಸ್ತಿ ಪ್ರಧಾನ ಮಾಡಿದರು.
ಬಾಲಾಕೋಟ್‌ನ ಜೈಷ್ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ಕೆಚ್ಚೆದೆಯ ವೈಮಾನಿಕ ದಾಳಿ ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನದ ಯುದ್ಧ ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ಹೊಡೆದುರುಳಿಸಿದ್ದರು. ಜೊತೆಗೆ ಬಾಲಾಕೋಟ್ ದಾಳಿಯಲ್ಲಿ ಪಾಲ್ಗೊಂಡಿದ್ದ ವಾಯುಪಡೆಯ ಅಮಿತ್ ರಂಜನ್, ರಾಹುಲ್ ಬಸೋಯಾ, ಪಂಕಜ್ ಭುಜಾಡೆ, ಬಿಕೆಎನ್ ರೆಡ್ಡಿ, ಶಶಾಂಕ್ ಸಿಂಗ್ ಸೇರಿದಂತೆ ಐಎಎಫ್‌ನ 7 ಪೈಲಟ್‌ಗಳಿಗೆ ಕೂಡ 'ವಾಯುಸೇನಾ' ಪದಕ ಪ್ರಕಟಿಸಲಾಗಿದೆ.
PublicNext
22/11/2021 01:16 pm