ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿರುವ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಹಾಗೂ 11 ಸೇನಾ ಸಿಬ್ಬಂದಿ ಅಂತ್ಯಕ್ರಿಯೆ ಇಂದು ದೆಹಲಿಯಲ್ಲಿ ನಡೆಯಲಿದೆ.
ಕಾಮ್ರಾಜ್ ಮಾರ್ಗ್ನ ಬಿಪಿನ್ ರಾವತ್ ನಿವಾಸದಲ್ಲಿ, ಬೆಳಗ್ಗೆ 11ರಿಂದ 12.30ರವರೆಗೆ ಸಾರ್ವಜನಿಕರಿಂದ ಅಂತಿಮ ದರ್ಶನಕ್ಕೆ ಅವಕಾಶ ಕೊಡಲಾಗಿದೆ. ಮಧ್ಯಾಹ್ನ 12.30ರಿಂದ 1.30ರವರೆಗೆ ಸೇನಾ ಸಿಬ್ಬಂದಿಯಿಂದ ಗೌರವ ಸಲ್ಲಿಸಲಾಗುತ್ತದೆ. ಬಳಿಕ 2 ಗಂಟೆಯಿಂದ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭವಾಗಲಿದೆ. ಸಂಜೆ 4 ಗಂಟೆ ಸುಮಾರಿಗೆ ಬ್ರಾರ್ ಸ್ಕ್ವೇರ್ ಸ್ಮಶಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿಪಿನ್ ರಾವತ್ರ ಅಂತ್ಯಕ್ರಿಯೆ ನಡೆಸಲಾಗುತ್ತೆ.
PublicNext
10/12/2021 10:12 am