ಬೆಂಗಳೂರು: ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ಸ್ (ಸಿಡಿಎಸ್) ಬಿಪಿನ್ ರಾವತ್ ಸೇರಿದಂತೆ 13 ಜನರ ಸಾವಿಗೆ ಕಾರಣವಾದ ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಊಹಾಪೋಹಗಳನ್ನು ನಿಲ್ಲಿಸಿ ಎಂದು ಭಾರತೀಯ ವಾಯುಸೇನೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ತಮಿಳುನಾಡಿನ ಕೂನೂರು ಬಳಿ ಡಿ.8 ರಂದು ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಕುರಿತ ಊಹಾಪೋಹಗಳನ್ನು ನಿಲ್ಲಿಸಬೇಕು. ಆ ಮೂಲಕ ಮೃತರ ಘನತೆ ಕಾಪಾಡುವಂತೆ ಭಾರತೀಯ ವಾಯುಸೇನೆ ಮನವಿ ಮಾಡಿದೆ.
‘ಹೆಲಿಕಾಪ್ಟರ್ ದುರಂತದ ಕಾರಣದ ತನಿಖೆಗಾಗಿ ಭಾರತೀಯ ವಾಯುಪಡೆಯು ಮೂರೂ ಸೇನೆಗಳ ಸದಸ್ಯರು ಇರುವ ಸಮಿತಿ ರಚಿಸಿದೆ. ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಸತ್ಯವನ್ನೂ ಹೊರತರಲಾಗುತ್ತದೆ. ಅಲ್ಲಿಯವರೆಗೆ, ಮಡಿದವರ ಘನತೆಯನ್ನು ಕಾಪಾಡಲು, ಮಾಹಿತಿ ಇಲ್ಲದ ಊಹಾಪೋಹಗಳನ್ನು ತಡೆಯಬೇಕು,’ ಎಂದು ವಾಯುಪಡೆಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
PublicNext
10/12/2021 06:07 pm