ನವದೆಹಲಿ: ಅತಿ ಬೇಗನೆ ಹೆಣ್ಣು ಮಕ್ಕಳಿಗೆ ವಿವಾಹ ಮಾಡುವ ಪದ್ಧತಿ ಭಾರತದಲ್ಲಿ ಇನ್ನು ಅಲ್ಲಲ್ಲಿ ಜಾರಿಯಲ್ಲಿದೆ. ಇದರ ಮಧ್ಯೆ ಒಂದು ಸಮಾಧಾನ ಸುದ್ದಿ ಅಂದ್ರೆ ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ ಮಾಡಿ ಕೇಂದ್ರ ಸಂಪುಟ ಅನುಮೋದನೆ ನೀಡಿದೆ ಮೂಲಗಳು ತಿಳಿಸಿವೆ.
ದೇಶದ 74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಅಂದರೆ 2020ರ ಆಗಸ್ಟ್ 15ರಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುವಾಗ ಈ ವಿಚಾರವನ್ನು ಪ್ರಸ್ತಾಪಸಿದ್ದರು.
ಸದ್ಯ ಇರುವ ಕಾನೂನಿನ ಪ್ರಕಾರ, ನಿಗದಿಪಡಿಸಲಾಗಿರುವ ವಿವಾಹದ ವಯಸ್ಸು ಗಂಡುಮಕ್ಕಳಿಗೆ 21 ಹಾಗೂ ಹೆಣ್ಣುಮಕ್ಕಳಿಗೆ 18 ವರ್ಷ. ಈ ಹಿನ್ನೆಲೆಯಲ್ಲಿ ಹೊಸ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಾಲ್ಯವಿವಾಹ ನಿಷೇಧ ಕಾಯಿದೆ, ವಿಶೇಷ ವಿವಾಹ ಕಾಯಿದೆ ಮತ್ತು ಹಿಂದೂ ವಿವಾಹ ಕಾಯಿದೆಗಳಲ್ಲಿ ಬದಲಾವಣೆ ಮಾಡಲು ಸರ್ಕಾರ ಮುಂದಾಗಿದೆ.
ವಿ.ಕೆ.ಪೌಲ್, ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳು, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಕಾನೂನು ಸಚಿವಾಲಯದ ಸದಸ್ಯರನ್ನೊಳಗೊಂಡ ಟಾಸ್ಕ್ ಫೋರ್ಸ್ ಅನ್ನು ಕೇಂದ್ರ ಸರ್ಕಾರ ರಚಿಸಿತ್ತು. ಆ ವೇಳೆ ಮಹಿಳೆ ಮೊದಲ ಗರ್ಭಧಾರಣೆಯ ಸಮಯದಲ್ಲಿ ಮಹಿಳೆಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಎಂದು ಟಾಸ್ಕ್ ಫೋರ್ಸ್ ಪ್ರತಿಪಾದಿಸಿತ್ತು.
PublicNext
16/12/2021 12:15 pm