ಬೆಳಗಾವಿ : ಕುಂದಾನಗರಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ನಗರ ಸ್ಥಳೀಯ ಸಂಸ್ಥೆಗಳಲ್ಲಿ 2064 ಪೌರ ಕಾರ್ಮಿಕರ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಇನ್ನು ಜಿಲ್ಲಾಧಿಕಾರಿಗಳು ಈ ನೇಮಕಾತಿ ಜವಾಬ್ದಾರಿ ಹೊರಲಿದ್ದಾರೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ತಿಳಿಸಿದ್ದಾರೆ.
ಸುವರ್ಣ ಸೌಧದ ಬಳಿ ಸೇವಾ ಖಾಯಮಾತಿಗೆ ಅಗ್ರಹಿಸಿ ಧರಣಿ ನಡೆಸುತ್ತಿದ್ದ ಪೌರಾಡಳಿತ ಇಲಾಖೆಯ ಪೌರ ಕಾರ್ಮಿಕರು, ಲೋಡರ್ಗಳು, ವಾಟರ್ ಮ್ಯಾನ್ ಗಳು, ಕಸದ ಆಟೋ ಚಾಲಕರು, ಕಂಪ್ಯೂಟರ್ ಅಪರೇಟರ್ ಗಳು, ಯು.ಜಿ.ಡಿ. ಕಾರ್ಮಿಕರು ಮತ್ತು ಕಛೇರಿ ಸಹಾಯಕರ ಅಹವಾಲನ್ನು ಆಲಿಸಿದ ನಂತರ ಸಚಿವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ಕೆಳಹಂತದ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದು ಸಚಿವ ಎಂ.ಟಿ.ಬಿ. ನಾಗರಾಜ್ ಭರವಸೆ ನೀಡಿದರು.
PublicNext
21/12/2021 10:51 pm