ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಅಂಗೀಕಾರ

ಬೆಳಗಾವಿ : ವಿರೋಧ ಪಕ್ಷಗಳ ಗದ್ದಲ ಗಲಾಟೆಗಳ ನಡುವೆಯೇ ಇಂದು ಮತಾಂತರ ನಿಷೇಧ ಮಸೂದೆ ಅಂಗೀಕಾರವಾಗಿದೆ. ಕರ್ನಾಟಕ ಸರ್ಕಾರವು ಮಂಗಳವಾರ (ಡಿ.21) ವಿಧಾನಸಭೆಯಲ್ಲಿ ಮಂಡಿಸಿದ್ದ ಮತಾಂತರ ನಿಷೇಧ ಕಾಯ್ದೆಗೆ ಗುರುವಾರ (ಡಿ.23) ಸದನದ ಅನುಮೋದನೆ ದೊರೆಯಿತು. ಪ್ರತಿಪಕ್ಷಗಳ ತೀವ್ರ ಆಕ್ಷೇಪ, ಗದ್ದಲದ ನಡುವೆಯೂ ವಿಧೇಯಕವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಧ್ವನಿಮತಕ್ಕೆ ಹಾಕಿದರು. ಧ್ವನಿಮತದ ಮೂಲಕವೇ ವಿಧೇಯಕವನ್ನು ಸದನ ಅಂಗೀಕರಿಸಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ಹಾಗೂ ಅನುಮೋದನೆ ಕೋರಿಕೆಯ ನಂತರ ವಿಧೇಯಕವನ್ನು ಸ್ಪೀಕರ್ ಮತಕ್ಕೆ ಹಾಕಿದರು. ಗದ್ದಲ, ಕೋಲಾಹಲದ ನಡುವೆಯೇ ವಿಧಾನಸಭೆಯಲ್ಲಿ ಧ್ವನಿಮತದ ಮೂಲಕ ವಿಧೇಯಕ ಅಂಗೀಕಾರವಾಯಿತು.

ಮತಾಂತರ ನಿಷೇಧ ಕಾಯ್ದೆಯ ಮುಖ್ಯಾಂಶಗಳು:

1) ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮೊದಲು ಫಾರ್ಮ್ 1 ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡತಕ್ಕದ್ದು.

2) ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಈಗಾಗಲೇ ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡತಕ್ಕದ್ದು

3) ಮತಾಂತರವಾದ ಒಂದು ತಿಂಗಳ ಬಳಿಕ ಡಿಕ್ಲರೇಷನ್ ಫಾರ್ಮ್ ಅಥವಾ ಘೋಷಣಾಪತ್ರವನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಭರ್ತಿ ಮಾಡಿ ನೀಡತಕ್ಕದ್ದು

4) ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡತಕ್ಕದ್ದು

5) ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೊತ್ತರ ಘಟನೆಯ ಸಂಪೂರ್ಣ ಘಟನೆಯನ್ನು ದಾಖಲಿಸತಕ್ಕದ್ದು

6) ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನ ದಾಖಲಿಸತಕ್ಕದ್ದು

7) ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡತಕ್ಕದ್ದು

8) ತಕರಾರುಗಳಿದ್ದ ಪಕ್ಷದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಬಂಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದಂತೆ ಇತರ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡತಕ್ಕದ್ದು

9) ಮ್ಯಾಜಿಸ್ಟ್ರೇಟ್‌ರಿಂದ ಮಾಹಿತಿ ಸ್ವಕರಿಸಿದ ಬಳಿಕ ಸಂಬಂಧಪಟ್ಟ ಇಲಾಖೆ ಮತಾಂತರ ಹೊಂದಿದ ವ್ಯಕ್ತಿಯ ಸಾಮಾಜಿಕ ಸ್ಥಾನಮಾನ ಹಾಗೂ ಸರ್ಕಾರದಿಂದ ಸಿಗುವ ಆರ್ಥಿಕ ಲಾಭಗಳ ಬಗ್ಗೆ ಸೂಕ್ತ ಕ್ರಮ ವಹಿಸುವುದು.

Edited By : Nirmala Aralikatti
PublicNext

PublicNext

23/12/2021 05:31 pm

Cinque Terre

76.05 K

Cinque Terre

60

ಸಂಬಂಧಿತ ಸುದ್ದಿ