ಅಮರಾವತಿ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಹೊರಡಿಸಿದೆ.
ಈ ನಿಯಮ ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ಕ್ರಮವಹಿಸಲಾಗಿದೆ ಎಂದು ಆಂಧ್ರ ಪ್ರದೇಶ ಸರ್ಕಾರವು ತಿಳಿಸಿದೆ. ಸರ್ಕಾರ ನಿರ್ಧಾರವು ನೌಕರರಲ್ಲೂ ಅಚ್ಚರಿ ಮೂಡಿಸಿದೆ.
ನಿವೃತ್ತಿ ವಯಸ್ಸನ್ನು ಹೆಚ್ಚಿಸಿ ಎಂದು ಸರ್ಕಾರಿ ನೌಕರರು ಯಾರೂ ಪ್ರತಿಭಟನೆ ಮಾಡಿಲ್ಲ. ಆದರೂ ಸರ್ಕಾರ ನಿವೃತ್ತಿ ವಯಸ್ಸನ್ನು ಹೆಚ್ಚಿಸಿದೆ. ಇದರೊಂದಿಗೆ ಆಂಧ್ರಪ್ರದೇಶದ ಸರ್ಕಾರಿ ನೌಕರರ ಭವಿಷ್ಯ ನಿಧಿ, ಗ್ರಾಚ್ಯುಟಿ ಮತ್ತು ಇತರ ಪ್ರಯೋಜನಗಳು ಸರಾಸರಿ ಸುಮಾರು 30 ಲಕ್ಷ ರೂ. ಆಗಿದೆ. ಅನೇಕ ಸಿಬ್ಬಂದಿಗೆ ನಿವೃತ್ತಿ ಪ್ರಯೋಜನಗಳ ಪಾವತಿಯನ್ನು ಎರಡು ವರ್ಷಗಳವರೆಗೆ ಮುಂದೂಡಬಹುದು. ಪಿಂಚಣಿ ಹಾಗೂ ಇತರ ನಿವೃತ್ತಿ ಪ್ರಯೋಜನಗಳ ಮೇಲೆ ಸರ್ಕಾರವು ಮಾಡುವ ವೆಚ್ಚವನ್ನು ಮುಂದೂಡುತ್ತದೆ.
PublicNext
31/01/2022 09:28 pm