ಆನೇಕಲ್ : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜಾಪುರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದರು. ಆ ಜಾಗವನ್ನು ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮೂಲಕ ತೆರವು ಮಾಡಿದರು.
ಇಲ್ಲಿನ 20 ಗುಂಟೆ ಸರ್ಕಾರಿ ಜಾಗವನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದರು. ಈ ಜಾಗದಲ್ಲಿ ಸರ್ಕಾರಿ ನಾಮಫಲಕವನ್ನು ಅಳವಡಿಕೆ ಮಾಡಿದರು. 50 ಲಕ್ಷ ಮೌಲ್ಯದ ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳು ಕಬಳಿಸಿದ್ದರು. ತಹಶೀಲ್ದಾರ್ ದಿನೇಶ್ ನೇತೃತ್ವದಲ್ಲಿ 22 ಗುಂಟೆ ಜಾಗವನ್ನು ಮತ್ತೆ ಸರ್ಕಾರಿ ವಶಕ್ಕೆ ಪಡೆಯಲಾಗಿದೆ.
PublicNext
06/02/2022 08:29 pm