ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಬಜೆಟ್: ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ- ಮಾಸಿಕ ಗೌರವಧನ ಹೆಚ್ಚಳ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ರಾಜ್ಯದಲ್ಲಿನ ಉನ್ನತ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಸರ್ಕಾರ ತಿಳಿಸಿದೆ. ಜೊತೆಗೆ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು ಹೆಚ್ಚಿಸಿ ಮಾಸಿಕ ಗೌರವಧನವನ್ನು 11,000 ದಿಂದ 32,000 ರೂ.ಗೆ ಹೆಚ್ಚಿಸಲಾಗಿದೆ.

2022–23ನೇ ಸಾಲಿನಲ್ಲಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಸೇರಿದಂತೆ 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆಯನ್ನು ಘೋಷಣೆ ಮಾಡಲಾಗಿದೆ.

Edited By : Vijay Kumar
PublicNext

PublicNext

04/03/2022 06:13 pm

Cinque Terre

47.66 K

Cinque Terre

0