ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೂ ಉಪ ನೋಂದಣಿ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು: ರಾಜ್ಯದಾದ್ಯಂತ ಮಾರ್ಚ್‌ 31ರವರೆಗೆ ಉಪ ನೋಂದಣಿ ಕಚೇರಿಗಳ ಕೆಲಸದ ವೇಳೆಯನ್ನು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8ರವರೆಗೂ ವಿಸ್ತರಿಸಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು ಶನಿವಾರ ಆದೇಶ ಹೊರಡಿಸಿದ್ದಾರೆ.

ಉಪನೋಂದಣಿ ಕಚೇರಿಗಳಲ್ಲಿನ ಜನ ಸಂದಣಿಯನ್ನು ಪರಿಗಣಿಸಿ ಸಾರ್ವಜನಿಕರ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ವ್ಯಾಪ್ತಿಯ ಉಪನೋಂದಣಿ ಕಚೇರಿಗಳ ಕೆಲಸದ ವೇಳೆಯನ್ನು ತಾತ್ಕಾಲಿಕವಾಗಿ ವಿಸ್ತರಿಸಲಾಗಿದೆ.

ಈ ಮೊದಲು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೂ ಉಪ ನೋಂದಣಿ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು. ಅದನ್ನು ಬದಲಿಸಿ, ಬೆಳಿಗ್ಗೆ 9ರಿಂದ ರಾತ್ರಿ 7ರವರೆಗೂ ಕಚೇರಿ ಅವಧಿ ವಿಸ್ತರಿಸಿ ಫೆಬ್ರುವರಿ 15ರಂದು ಆದೇಶ ಹೊರಡಿಸಲಾಗಿತ್ತು. ಈಗ ಮತ್ತೊಮ್ಮೆ ಕೆಲಸದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ನಾಲ್ಕನೇ ಶನಿವಾರವಾದ ಮಾರ್ಚ್‌ 26ರಂದು ಕೂಡ ಉಪ ನೋಂದಣಿ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ಆಯುಕ್ತರು ತಿಳಿಸಿದ್ದಾರೆ.

ತಿಂಗಳಾಂತ್ಯದವರೆಗೆ ಮಾತ್ರ ರಿಯಾಯ್ತಿ: ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಅಪಾರ್ಟ್‌ಮೆಂಟ್‌, ಫ್ಲ್ಯಾಟ್‌ ಮತ್ತು ಇತರೆ ಸ್ಥಿರಾಸ್ತಿಗಳ ನೋಂದಣಿಗೆ ಮುದ್ರಾಂಕ ಶುಲ್ಕ ನಿಗದಿಗೆ ಮಾರ್ಗಸೂಚಿ ದರದ ಶೇಕಡ 10ರಷ್ಟು ರಿಯಾಯ್ತಿ ನೀಡಿರುವ ಆದೇಶವು ಮಾರ್ಚ್‌ 31ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Edited By : Vijay Kumar
PublicNext

PublicNext

20/03/2022 08:23 am

Cinque Terre

44.6 K

Cinque Terre

2

ಸಂಬಂಧಿತ ಸುದ್ದಿ