ಬೆಂಗಳೂರು : ಇನ್ಮುಂದೆ ರಾಜ್ಯಾದ್ಯಂತ ಮಾರ್ಚ್ 16 ರಂದು ಜಗದ್ಗುರು ಶ್ರೀರೇಣುಕಾಚಾರ್ಯ ಜಯಂತಿ ಆಚರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಸಂಬಂಧ ಇಂದು ಸರ್ಕಾರ ಆದೇಶ ಹೊರಡಿಸಿದ್ದು ಶ್ರೀರೇಣುಕಾಚಾರ್ಯರು 'ಸಿದ್ಧಾಂತ ಶಿಖಾಮಣಿ' ಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆಯ ಬದುಕನ್ನು ಅವರು ಬೋಧಿಸಿದ್ದಾರೆ. ಕರ್ನಾಟಕ ಸೇರಿ ದಕ್ಷಿಣ ಭಾರತದಾದ್ಯಂತ ಲಕ್ಷಾಂತರ ಭಕ್ತ ಸಮೂಹ ಹೊಂದಿದ್ದಾರೆ.
ಈ ಹಿನ್ನೆಲೆ ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಕಲಬುರಗಿಯ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದರ ಆಧಾರದ ಮೇಲೆ ಸರ್ಕಾರ ಶ್ರೀ ರೇಣುಕಾಚಾರ್ಯ ಜಯಂತಿನ ಪ್ರತಿ ವರ್ಷ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.
PublicNext
25/03/2022 09:44 pm