ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಆಮ್ ಆದ್ಮಿ ಪಾರ್ಟಿಯು ಸಂಪೂರ್ಣ ಬೆಂಬಲ ಘೋಷಿಸಿದೆ.
ಈ ಸಂಬಂಧ ನಿನ್ನೆ (ಸೋಮವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರದ ಎಎಪಿ ಅಧ್ಯಕ್ಷ ಮೋಹನ್ ದಾಸರಿ, "ನ್ಯಾಯಕ್ಕೆ ಆಗ್ರಹಿಸಿ ಅಹಿಂಸಾತ್ಮಕವಾಗಿ ಹೋರಾಟ ಮಾಡುವ ಹಕ್ಕು ಎಲ್ಲರಿಗೂ ಇದೆ. ಆದರೆ 2021ರಲ್ಲಿ ಮುಷ್ಕರದಲ್ಲಿ ಭಾಗವಹಿಸಿದ ಕಾರಣಕ್ಕೆ ಸಾರಿಗೆ ನೌಕರರನ್ನು ಸರ್ಕಾರ ವಜಾ ಮಾಡಿರುವುದು ಖಂಡನೀಯ. ಸರ್ಕಾರದ ಅಮಾನವೀಯ ನಡೆಯಿಂದಾಗಿ ಅನೇಕ ಸಾರಿಗೆ ನೌಕರರ ಕುಟುಂಬಗಳು ಬೀದಿಗೆ ಬರುವ ಆತಂಕದಲ್ಲಿವೆ. ಆ ಎಲ್ಲ ನೌಕರರನ್ನು ಶೀಘ್ರವೇ ಮರುನೇಮಕ ಮಾಡಿಕೊಳ್ಳಬೇಕು. ಇದರ ಜೊತೆಗೆ, ವೇತನ ಪರಿಷ್ಕರಣೆ ಸೇರಿದಂತೆ ಸರ್ಕಾರವು ಸಾರಿಗೆ ನೌಕರರಿಗೆ ನೀಡಿದ್ದ ಅನೇಕ ಭರವಸೆಗಳನ್ನು ಶೀಘ್ರವೇ ಈಡೇರಿಸಬೇಕು" ಎಂದು ಆಗ್ರಹಿಸಿದ್ದಾರೆ.
PublicNext
29/03/2022 12:18 pm