ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇಂದಿನಿಂದ ಮೂರು ದಿನಗಳವರೆಗೂ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗಲಿದೆ.ಇದಕ್ಕೆ ಕಾರಣ ಏನೂ ಅಂತಿರೋ. ಬನ್ನಿ, ಹೇಳ್ತಿವಿ.
ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆನೆ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಏಪ್ರಿಲ್-01 ರಂದು ಇವರನ್ನ ಕೆಲಸದಿಂದ ಬಿಡುಗಡೆ ಮಾಡಿ,ಏಪ್ರಿಲ್-02 ರಿಂದ ಸೇವೆಗೆ ಸೇರ್ಪಡೆ ಮಾಡಲಾಗುತ್ತಿದೆ.
ಈ ಒಂದು ಕಾರಣಕ್ಕೇನೆ ಏಪ್ರಿಲ್ 1 ರಂದು ರಾಜ್ಯಾದ್ಯಂತ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
PublicNext
01/04/2022 10:40 am