ಅಹಮದಾಬಾದ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಎರಡು ದಿನಗಳ ಭಾರತ ಪ್ರವಾಸಕ್ಕಾಗಿ ಗುರುವಾರ ಗುಜರಾತ್ ರಾಜಧಾನಿ ಅಹಮದಾಬಾದ್‌ಗೆ ಬಂದಿಳಿದರು. ಅವರಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ್, ವಿವಿಧ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಭವ್ಯ ಸ್ವಾಗತ ನೀಡಿದರು. ಅಹಮದಾಬಾದ್‌ನಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದರು. ಈ ವೇಳೆ ಚರಕ ಹಿಡಿದು ನೂಲು ತೆಗೆದಿದ್ದಾರೆ.
PublicNext
21/04/2022 12:28 pm