ಬೆಂಗಳೂರು: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೇರಿದಂತೆ ಒಟ್ಟು 16 ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ ಮಾಡಲಾಗಿದೆ.
ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ಗೌರವ್ ಗುಪ್ತಾ ವರ್ಗಾವಣೆ ಹೊಂದಿದ್ದಾರೆ. ಜೊತೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಟಿಕೆ ಅನಿಲ್ ಕುಮಾರ್ ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಮನೋಜ್ ಜೈನ್ ನೇಮಕಗೊಂಡಿದ್ದಾರೆ. ಇನ್ನು ಮುಖ್ಯಮಂತ್ರಿ ಕಾರ್ಯದರ್ಶಿ ಪೊನ್ನುರಾಜ್ ವರ್ಗಾವಣೆಯಾಗಿದ್ದು, ಪೊನ್ನುರಾಜ್ ಗೆ ಕೆಪಿಸಿಎಲ್ ಎಂಡಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಹಾಗೇ, 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಓರ್ವ ಐಎಎಸ್ ಅಧಿಕಾರಿಗೆ ಹೆಚ್ಚುವರಿ ಹೊಣೆಗಾರಿಕೆಗೆ ನೀಡಿದೆ.
ದೆಹಲಿ ಕರ್ನಾಟಕ ಭವನದ ಉಪಸ್ಥಾನೀಯ ಆಯುಕ್ತರಾಗಿ ಖುಷ್ಬೂ ಚೌಧರಿ ನೇಮಕಗೊಂಡಿದ್ದಾರೆ. ಕೆಪಿಎಸ್ ಸಿ ಕಾರ್ಯದರ್ಶಿಯಾಗಿ ಕ್ಯಾ.ಡಾ.ರಾಜೇಂದ್ರ, ಕೆಆರ್ ಐಡಿಎಲ್ ಎಂಡಿ ಆಗಿ ಎಂ.ಜಿ.ಹಿರೇಮಠ, ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆಗಿ ನಿತೇಶ್ ಪಾಟೀಲ್, ಧಾರವಾಡ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗ್ಡೆ ವರ್ಗಾವಣೆಯಾಗಿದ್ದಾರೆ.
ಕೆಎಸ್ ಆರ್ ಟಿಸಿ ನಿರ್ದೇಶಕರಾಗಿ ಡಾ. ನವೀನ್ ಭಟ್, ಬಾಗಲಕೋಟೆ ಜಿಲ್ಲಾಧಿಕಾರಿ ಭೂ ಬಾಲನ್ ಟಿ, ಇಡಿಸಿಎಸ್ ನಿರ್ದೇಶಕರಾಗಿ ಡಾ.ದಿನೇಶ್ ಸಸಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಭರತ್ ಎಸ್, ಕೆಯುಐಡಿಎಫ್ ಸಿ ಎಂಡಿಯಾಗಿ ಶಿಲ್ಪಾ ಎಂ, ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಪ್ರಸನ್ನ ಹೆಚ್, ಕಲಬುರಗಿ ಜಿ.ಪಂ. ಸಿಇಒ ಆಗಿದೆ ಡಾ.ಗಿರೀಶ್ ದಿಲೀಪ್ ಬಾಡೋಲೆ ಅವರನ್ನು ವರ್ಗಾವಣೆ ಮಾಡಲಾಗಿದೆ.
PublicNext
05/05/2022 04:54 pm