ಹೊಸದಿಲ್ಲಿ : ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕಗೊಂಡಿದ್ದಾರೆ. ಅನಿಲ್ ಬೈಜಾಲ್ ಅವರ ರಾಜೀನಾಮೆ ಅಂಗೀಕರಿಸಿದ ಬಳಿಕ ರಾಷ್ಟ್ರಪತಿ ರಾಮನಾಥ ಕೋವಿಂದ್ ಆ ಸ್ಥಾನಕ್ಕೆ ವಿನಯ್ ಕುಮಾರ್ ಸಕ್ಸೇನಾ ಅವರನ್ನು ನೇಮಿಸಿದ್ದಾರೆ.
ಕಳೆದ ವಾರ, ಹಲವಾರು ವಿಷಯಗಳಲ್ಲಿ ದೆಹಲಿ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದರು. ಮೇ 23ರ ಸೋಮವಾರದಂದು ಅವರ ರಾಜೀನಾಮೆ ನೀಡಿದ್ದಾರೆ.
ಮಾರ್ಚ್ 23, 1958 ರಂದು ಜನಿಸಿದ ವಿನಯ್ ಕುಮಾರ್ ಸಕ್ಸೇನಾ ಅವರು ಕಾನ್ಪುರ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ. ಇತ್ತೀಚಿನವರೆಗೂ ಅವರು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ (ಕೆವಿಐಸಿ) ಅಧ್ಯಕ್ಷರಾಗಿದ್ದರು.
PublicNext
24/05/2022 01:02 pm