ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮ ಅವರನ್ನು ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರ ಅಧಿಕಾರ ಅವಧಿ ಈ ತಿಂಗಳ (ಮೇ) 31ಕ್ಕೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ವಂದಿತಾ ಶರ್ಮ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವಂದಿತಾ ಶರ್ಮಾ ಅವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಮ್​ ಅಭಿವೃದ್ಧಿ ಆಯುಕ್ತರಾಗಿದ್ದರು. 1986-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಥೆರೇಸಾ ಭಟ್ಟಾಚಾರ್ಯ, ಮಾಲತಿ ದಾಸ್ ಮತ್ತು ರತ್ನ ಪ್ರಭಾ ಅವರ ನಂತರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಥಾನವನ್ನು ಅಲಂಕರಿಸಿದ ನಾಲ್ಕನೇ ಮಹಿಳೆಯಾಗಿದ್ದಾರೆ.

Edited By : Vijay Kumar
PublicNext

PublicNext

27/05/2022 08:29 pm

Cinque Terre

95.7 K

Cinque Terre

7