ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು ಕಲುಷಿತ ನೀರು ಸೇವನೆ ಪ್ರಕರಣ: ತಲಾ 5 ಲಕ್ಷ ರೂ. ಪರಿಹಾರಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವನ್ನಪ್ಪಿರುವ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಸೂಚಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಬಗ್ಗೆ ಸಂಪೂರ್ಣ ವರದಿ ತರಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.

ರಾಯಚೂರಿನಲ್ಲಿ ಕಲುಷಿತ ನೀರಿನ ಹಿನ್ನೆಲೆ ಡಿಸಿಗೆ ರಾಯಚೂರಿನ ಎಲ್ಲ ವಾರ್ಡ್‍ಗಳ ನೀರು ಪರಿಶೀಲಿಸಲು ಸೂಚಿಸಿದ್ದೇನೆ. ಡಿವೈಎಸ್‍ಪಿ ನೇತೃತ್ವದಲ್ಲಿ ತನಿಖೆಗೆ ಸೂಚಿಸಿದ್ದೇನೆ. ಅಧಿಕಾರಿಗಳ ತಪ್ಪಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮೃತರಿಗೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲಾಗುವುದು. ಸಿಎಂ ರಿಲೀಫ್ ಫಂಡ್ ನಿಂದ ಪರಿಹಾರ ನೀಡಲಾಗುತ್ತೆ ಎಂದರು.

Edited By : Vijay Kumar
PublicNext

PublicNext

06/06/2022 02:28 pm

Cinque Terre

47.7 K

Cinque Terre

1

ಸಂಬಂಧಿತ ಸುದ್ದಿ