ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳ ಸೇವಾ ಸಮಯ ಮರುನಿಗದಿಯಾಗಿದ್ದು, ಬೆಳಗ್ಗೆ 10ರಿಂದ ಸಂಜೆ 5.30ರ ವರೆಗೆ ಸಮಯ ನಿಗದಿ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ.
ಸಬ್ ರಿಜಿಸ್ಟ್ರಾರ್ ಕಚೇರಿಗಳು ಬೆಳಗ್ಗೆ 10ರಿಂದ ಸಂಜೆ 5:30 ರವರೆಗೆ ಸೇವೆ ಸಲ್ಲಿಸುತ್ತಿದ್ದವು. ವರ್ಷದ ಆರಂಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 8ರಿಂದ ರಾತ್ರಿ 8 ಗಂಟೆವರೆಗೂ ಸಬ್ ರಿಜಿಸ್ಟ್ರಾರ್ ಕಚೇರಿಗಳ ಸೇವಾವಧಿ ನಿಗದಿ ಮಾಡಲಾಗಿತ್ತು. ಏಪ್ರಿಲ್ನಲ್ಲಿ ಸೇವಾವಧಿಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿತ್ತು. ಏಪ್ರಿಲ್ನಿಂದ ಜೂನ್ 24ರವರೆಗೂ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳ ಕಾರ್ಯ ಅವಧಿ ಇತ್ತು. ಇದೀಗ ಮೊದಲಿನಂತೆ ಸೇವಾ ಸಮಯ ನಿಗದಿಯಾಗಿದೆ. ಅಂದರೆ ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಸೇವೆ ಸಲ್ಲಿಸಲಿವೆ.
PublicNext
28/06/2022 04:47 pm