ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

8 ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಏಕಾಏಕಿ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಇನ್ನು ಈ ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು ಇವರೆ ನೋಡಿ

ಅಮ್ಲನ್ ಆದಿತ್ಯ ಬಿಸ್ವಾಸ್, ಐಎಎಸ್ (ಕೆ.ಎನ್: 1997) ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ವಿಭಾಗಕ್ಕೆ ವರ್ಗ

ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ಐಎಎಸ್ (ಕೆ.ಎನ್: 2010) ಸಹಕಾರ ಸಂಘಗಳ ರಿಜಿಸ್ಟ್ರಾರ್ ಮತ್ತು ಬೆಂಗಳೂರಿನ ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಾಗಿ ಖಾಲಿ ಇರುವ ಹುದ್ದೆಗಳಲ್ಲಿ ನೇಮಿಸಲಾಗಿದೆ.

ಸುಂದರೇಶ ಬಾಬು ಎಂ., ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಗದಗ ಜಿಲ್ಲೆ, ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್, ಬೆಂಗಳೂರಿಗೆ ನೇಮಕ

ಸುರಳ್ಕರ್ ವಿಕಾಸ್ ಕಿಶೋರ್, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಕೊಪ್ಪಳ ಜಿಲ್ಲೆ, ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಕಾರ್ಯದರ್ಶಿಯಾಗಿ ನೇಮಕ

ಹೊನ್ನಾಂಬ, ಐಎಎಸ್ (ಕೆ.ಎನ್: 2012), ಕಾರ್ಯದರ್ಶಿ, ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಜಿಲ್ಲಾಧಿಕಾರಿ, ಗದಗ ಜಿಲ್ಲೆಗೆ ವರ್ಗಾವಣೆ

ಆರ್.ಲತಾ, ಐಎಎಸ್ (ಕೆ.ಎನ್: 2012), ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲೆ, ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆ.

ಲೋಖಂಡೆ ಸ್ನೇಹಲ್ ಸುಧಾಕರ್, ಐಎಎಸ್ (ಕೆ.ಎನ್: 2017) ಸರ್ಕಾರದ ಉಪ ಕಾರ್ಯದರ್ಶಿಯಾಗಿ, ಉನ್ನತ ಶಿಕ್ಷಣ ಇಲಾಖೆ, ಬೆಂಗಳೂರಿಗೆ ವರ್ಗ ಮಾಡಿ ತತಕ್ಷಣ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Edited By : Nirmala Aralikatti
PublicNext

PublicNext

11/07/2022 09:45 pm

Cinque Terre

62.23 K

Cinque Terre

0