ನವದೆಹಲಿ: ದೇಶದಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ನಡೆದ ಹಿಂಸಾಚಾರದ ಪ್ರತಿಭಟನೆಯಿಂದಾಗಿ ರೈಲ್ವೆ ಇಲಾಖೆಗೆ ಬರೋಬ್ಬರಿ 259.44 ಕೋಟಿ ರೂ. ನಷ್ಟವಾಗಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ಜೂನ್ 15 ರಿಂದ 23ರ ಅವಧಿಯಲ್ಲಿ 2,132 ರೈಲುಗಳ ಸಂಚಾರ ರದ್ದಾಗಿತ್ತು. ಈ ನಡುವೆ ಜೂನ್ 14 ರಿಂದ 30ರ ಅವಧಿಯಲ್ಲಿ 102 ರೂಪಾಯಿ ಹಣವನ್ನ ಪ್ರಯಾಣಿಕರಿಗೆ ಮರುಪಾವತಿ ಮಾಡಲಾಯಿತು. ಈ ಕಾರಣಗಳಿಂದ 259.44 ಕೋಟಿ ರೂ. ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.
PublicNext
23/07/2022 08:50 am