ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರಿಗೆ ಸಮನಾದ ಸ್ಥಾನಮಾನ ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಕನ್ನಡ ಸಾಹಿತ್ಯ ಪರಿಷತ್ ಸದಸ್ಯರೊಬ್ಬರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿರುವುದು ಇದೇ ಮೊದಲು.
ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಸಾಲುಮರದ ತಿಮ್ಮಕ್ಕ ಅವರಿಗೂ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಿ ಗೌರವಿಸಿತ್ತು.
ರಾಜ್ಯದ ಭಾಷೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ ಕನ್ನಡಾದರತಿ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಕರ್ನಾಟಕ ಸರ್ಕಾರ, ಇದೀಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೂ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಿದೆ.
PublicNext
03/08/2022 05:23 pm