ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಟ್ರ್ಯಾಕ್ಟರ್ ಹತ್ತಿ ಬಂದಿದ್ದು ಗಮನ ಸೆಳೆದಿದೆ.
ಮಳೆ ಹಾನಿ ಪರಿಶೀಲನೆಗೆ ಬಂದಿದ್ದ ವೇಳೆ ಕಾರಿಳಿದು ಟ್ರ್ಯಾಕ್ಟರ್ ನಲ್ಲಿ ಧಾವಿಸಿ ವೀಕ್ಷಣೆ ನಡೆಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಮಳೆ ಆರಂಭವಾದಾಗಿನಿಂದ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ನಿರಂತರವಾಗಿ ಮಳೆ ಬಾದಿತ ಪ್ರದೇಶಗಳಿಗೆ ಭೇಟಿ ನೀಡುವುದರ ಜೊತೆಗೆ ಸಂತ್ರಸ್ತರ ನೆರವಿಗೆ ಧಾವಿಸುತ್ತಿರುವ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.
ಜಯಮಂಗಲಿ ತೀರದ ಚೆನ್ನಸಾಗರ, ಸೂರನಾಗೇನಹಳ್ಳಿ, ಎಂ.ಹೊಸಹಳ್ಳಿ, ಕಾಳೇನಹಳ್ಳಿ, ಸಿ.ವೀರಾಪುರ, ಕೋಡ್ಲಾಪುರ, ಇಮ್ಮುಡಗಹಳ್ಳಿ ಗ್ರಾಮಗಳು ಜಲಾವೃತಗೊಂಡಿವೆ. ಗ್ರಾಮದ ರಸ್ತೆಯಲ್ಲಿ ಸಂಚರಿಸಲು ಅನುವಾಗುವಂತೆ ಈಗಾಗಲೇ ಜೆಸಿಬಿಯಿಂದ ಕಾರ್ಯಾಚರಣೆ ಕೈಗೊಂಡಿದ್ದು, ಮುಂಜಾನೆಗಿಂತ ನೀರಿನ ಹರಿವಿನ ಪ್ರಮಾಣ ಮಧ್ಯಾಹ್ನದ ವೇಳೆಗೆ ಕಡಿಮೆಯಾಗಿದೆ.
ಮಳೆ ನೀರಿನಿಂದ ಬಾದಿತರಾದವರಿಗೆ ರಕ್ಷಣೆ ನೀಡುವಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮ ಕಾರ್ಯಪಡೆಗೆ ಈಗಾಗಲೇ ನಿರ್ದೇಶನ ನೀಡಿದ್ದು, ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
PublicNext
04/08/2022 04:40 pm