ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ರಜೌರಿ ಸಮೀಪದ ಭಾರತೀಯ ಸೇನಾ ಶಿಬಿರದ ಮೇಲೆ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ.ಈ ವೇಳೆ ಕರ್ತವ್ಯದಲ್ಲಿದ್ದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ವಿಷಯ ತಿಳಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ಕಳುಹಿದ್ದಾರೆ.
ಈ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಸದ್ಯ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
PublicNext
11/08/2022 08:57 am