ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದಿನಿಂದ ದೇಶಾದ್ಯಂತ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ

ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವಸಂತಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಇಡೀ ದೇಶವೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿದೆ. ಇದೇ ವೇಳೆ ಕೇಂದ್ರ ಸರಕಾರವು ಆಗಸ್ಟ್ 13, 14 ಹಾಗೂ 15ರಂದು ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ನೀಡಿದೆ. ಈ ಅಭಿಯಾನ ಯಶಸ್ವಿಗೊಳಿಸಲು ರಾಜ್ಯದಲ್ಲಿ ಮನೆ, ಖಾಸಗಿ ಕಟ್ಟಡ ಹಾಗೂ ಸರ್ಕಾರಿ ಕಚೇರಿ ಸೇರಿ ಕೋಟಿ ಧ್ವಜಾರೋಹಣ ಗುರಿ ಹಮ್ಮಿಕೊಳ್ಳಲಾಗಿದೆ.

ಈಗಾಗಲೇ ಧ್ವಜ ಮಾರಾಟ, ವಿತರಣೆ ಕಾರ್ಯ ಬಹುತೇಕ‌ ಮುಗಿದಿದೆ.‌ ಇಂದಿನಿಂದ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ವಾತಾವರಣ ನಿರ್ಮಾಣ ಆಗಲಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಚೇರಿಗಳಲ್ಲಿ ಈ ಮೂರು ದಿನಗಳಂದು ಪ್ರತಿ ದಿನ ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು. ಹಾಗೂ ಮನೆಗಳಲ್ಲಿ ಇಂದು ಬೆಳಗ್ಗೆ ಧ್ವಜಾರೋಹಣ ಮಾಡಿ 15ರವರೆಗೆ ಇರಿಸಬಹುದಾಗಿದೆ

Edited By : Nagaraj Tulugeri
PublicNext

PublicNext

13/08/2022 09:56 am

Cinque Terre

32.85 K

Cinque Terre

3

ಸಂಬಂಧಿತ ಸುದ್ದಿ