ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ರಾಜಧಾನಿಯಲ್ಲಿರುವ ಸದೈವ್ ಅಟಲ್ ಸ್ಮಾರಕ ಉದ್ಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪಾಧ್ಯಕ್ಷ ಜಗದೀಪ್ ಧನಕರ್ ಮತ್ತು ಇತರ ಪ್ರಮುಖ ನಾಯಕರು ಇಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಇವರೊಂದಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್, ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಇತರೆ ಗಣ್ಯರು ಭೇಟಿ ನೀಡಿ ಗೌರವ ಸಲ್ಲಿಸಿದರು. ವಾಯಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಮತ್ತು ಮೊಮ್ಮಗಳಾದ ನಿಹಾರಿಕಾ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
ದೀರ್ಘಕಾಲದ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ಆಗಸ್ಟ್ 16, 2018ರಂದು ವಿಧಿವಶರಾಗಿದ್ದರು.
PublicNext
16/08/2022 11:19 am