ತುರುವೇಕೆರೆ: ತಾಲೂಕಿನ ಮಾದಿಹಳ್ಳಿ ಗ್ರಾಪಂ ಪಿಡಿಓ ಲಿಂಗರಾಜೇ ಗೌಡ ಅಮಾನತ್ತು ಮಾಡಲಾಗಿದೆ.
ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಗೈರಾಗುವ ಮೂಲಕ ಕರ್ತವ್ಯ ಲೋಪ ಎಸಗಿದ್ದರ ಹಿನ್ನೆಲೆಯಲ್ಲಿ ಪಿಡಿಒ ನಿರ್ಲಕ್ಷ್ಯ ಖಂಡಿಸಿ ಸಾರ್ವಜನಿಕರು ಹಾಗೂ ಗ್ರಾಪಂ. ಅಧ್ಯಕ್ಷರು ಹಾಗೂ ಸದಸ್ಯರುಗಳು ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಸಿಇಒ ಅವರನ್ನು ಒತ್ತಾಯಿಸಿದ್ದರು.
ಸಾರ್ವಜನಿಕ ದೂರು ಹಾಗೂ ಇಒ ಸತೀಶ್ ಕುಮಾರ್ ಅವರ ವರದಿಯ ಮೇಲೆ ಪಿಡಿಒ ಲಿಂಗರಾಜೇ ಗೌಡನನ್ನು ತಕ್ಷಣ ಜಾರಿಗೆ ಬರುವಂತೆ ಸಿಇಒ ವಿದ್ಯಾಕುಮಾರಿ ಅಮಾನತು ಆದೇಶ ಹೊರಡಿಸಿದ್ದಾರೆ. ಮೇಲಾಧಿಕಾರಿಗಳ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
PublicNext
18/08/2022 07:45 pm