ಗದಗ: ಖಾಯಂ ಆಗಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯತ ಕಾರ್ಯದರ್ಶಿ ಬೇಕೆಂದು ಆಗ್ರಹಿಸಿ, ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮಸ್ಥರು ಸೇರಿಕೊಂಡು ಗ್ರಾಮ ಪಂಚಾಯತ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಮಜ್ಜೂರ ಗ್ರಾಮದಲ್ಲಿ ಮುಖ್ಯವಾಗಿ ಗ್ರಾಮ ಪಂಚಾಯತ ಅಧಿಕಾರಿ ಇಲ್ಲದೇ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಗ್ರಾಮಸ್ಥರಿಗೆ ಸಮರ್ಪಕ ಸೇವೆ ದೊರಕುತ್ತಿಲ್ಲ. ಹೀಗಾಗಿ ಕೂಡಲೇ ಕಾಯಂ ಆಗಿ ಈ ಇಬ್ಬರೂ ಸಿಬ್ಬಂದಿಗಳನ್ನು ನೇಮಕ ಮಾಡಬೇಕೆಂದು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ರು.
PublicNext
19/08/2022 08:09 pm