ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸರ್ಕಾರದಿಂದ 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅವರನ್ನು ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೇಲ್ವಕುಮಾರ್ ಅವರನ್ನು ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಆಹಾರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಕಂದಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನ, ಸೆಲ್ವಕುಮಾರ್ ಅವರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹೆಚ್ಚುವರಿಯಾಗಿ ನೀಡಲಾಗಿದೆ.

ಹಾಸನ ಜಿಲ್ಲಾಧಿಕಾರಿ ಗಿರೀಶ್ ಅವರನ್ನು ಕೆಐಎಡಿಬಿಸಿಇಒ, ಕಾರ್ಯಕಾರಿ ಸದಸ್ಯ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಅರ್ಚನಾ ಅವರನ್ನು ಹಾಸನ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಡಿಪಿಎಆರ್ ಕಾರ್ಯದರ್ಶಿ ವಿ.ಪೊನ್ನುರಾಜ್ ಅವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

Edited By : Vijay Kumar
PublicNext

PublicNext

21/08/2022 08:40 am

Cinque Terre

29.2 K

Cinque Terre

1

ಸಂಬಂಧಿತ ಸುದ್ದಿ