ಮಧುಗಿರಿ: ತಾಲೂಕಿನ ಪುರವರ ಹೋಬಳಿಯ ಇಮ್ಮಡಿ ಗೊಂಡನ ಹಳ್ಳಿ ಮಳೆಯಿಂದ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು ಮಂಗಳವಾರ ಉಪ ವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ತಹಶೀಲ್ದಾರ್ ಸುರೇಶ್ ಆಚಾರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎಂ.ಜಿ ಶ್ರೀನಿವಾಸಮೂರ್ತಿ ಸೇರಿದಂತೆ ಇತರರು ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವುದಾಗಿ ಭರವಸೆ ನೀಡಿ ಪ್ರಾಕೃತಿಕ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರದ ಭರವಸೆ ನೀಡಿದ್ದಾರೆ.
ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಮಸ್ಯೆಗಳ ಬಗ್ಗೆ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸ್ಥಳೀಯರು ಒತ್ತಾಯಿಸಿದ್ದಾರೆ.
PublicNext
30/08/2022 09:49 pm