ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಪಬ್ಲಿಕ್ ನೆಕ್ಸ್ಟ್‌ ವರದಿ ತಿಳಿದು ಸ್ಥಳಕ್ಕೆ ಮಾಜಿ ಡಿಸಿಎಂ ಭೇಟಿಕೊಡುವುದಾಗಿ ಎಚ್ಚೆತ್ತ ಅಧಿಕಾರಿಗಳು

ಕೊರಟಗೆರೆ: ತಾಲೂಕಿನಲ್ಲಿ ರಸ್ತೆ ಇಲ್ಲದೆ ಪರಿತಪಿಸುತ್ತಿರುವ ಗ್ರಾಮಸ್ಥರ ಸಮಸ್ಯೆಗೆ ಬುಧವಾರ ಪಬ್ಲಿಕ್ ನೆಕ್ಸ್ಟ್ ನಲ್ಲಿ ವರದಿ ಪ್ರಕಟಗೊಂಡಿತ್ತು.

ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ಧರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮಟೇನಹಳ್ಳಿ ಗ್ರಾಮವು ಕಂದಾಯ ಗ್ರಾಮವಾಗಿದ್ದರೂ ಸಹ ಮೂಲಭೂತ ಸೌಕರ್ಯಗಳಿಂದ ಗ್ರಾಮ ವಂಚಿತವಾಗಿ ಪ್ರಾಣಿಗಳಿಗಿಂತ ಕೀಳಾಗಿರುವ ಜೀವನ ಸಾಗಿಸುವಂತ ಸ್ಥಿತಿ ನಿರ್ಮಾಣವಾಗಿತ್ತು.

ಕಳೆದ 7 ವರ್ಷಗಳಿಂದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯಗಳ ಕೊರತೆ ಜೊತೆಗೆ ಮುಖ್ಯವಾಗಿ ಸಂಪರ್ಕ ರಸ್ತೆ ಇಲ್ಲದೆ ಜನರು ಹಳ್ಳವನ್ನೇ ರಸ್ತೆಯನ್ನಾಗಿ ಮಾಡಿಕೊಂಡು ಬಳಕೆ ಮಾಡುತ್ತಿದ್ದಾರೆ. ಬೆಂಡೋಣೆ ಗ್ರಾಮದಿಂದ ೧ ಕಿ.ಮೀ ದೂರದಲ್ಲಿರುವ ಸಂಪರ್ಕ ರಸ್ತೆ ಇಲ್ಲದೆ ಪರಿತಪಿಸುತ್ತಿದ್ದಾರೆ.

ಸತತವಾದ ಹೋರಾಟವನ್ನು ಈ ಊರಿನ ಗ್ರಾಮಸ್ಥರು ಮಾಡುತ್ತಿದ್ದಾರೆ. ಆದರೆ ಯಾವ ಜನಪ್ರತಿನಿಧಿಯೂ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು. ಜನರ ಅಳಲಿಗೆ ಪಬ್ಲಿಕ್ ನೆಕ್ಸ್ಟ್‌ ವರದಿ ಬಿತ್ತರಿಸಿ ಜನಪ್ರತಿನಿಧಿಯನ್ನು ಎಚ್ಚರಿಸುವ ಕೆಲಸಮಾಡಿತ್ತು.

ಇದನ್ನರಿತ ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ಇಂದು ಕುಮಟಹಳ್ಳಿಗೆ ಗ್ರಾಮಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದು, ಈಗಾಗಲೇ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಗ್ರಾಮಕ್ಕೆ ಪರಮೇಶ್ವರ್ ಭೇಟಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

ವರದಿ ರಾಘವೇಂದ್ರ ದಾಸರಹಳ್ಳಿ ಪಬ್ಲಿಕ್ ನೆಕ್ಸ್ಟ್,ತುಮಕೂರು.

Edited By : Abhishek Kamoji
PublicNext

PublicNext

01/09/2022 04:40 pm

Cinque Terre

34.44 K

Cinque Terre

0

ಸಂಬಂಧಿತ ಸುದ್ದಿ