ನವದೆಹಲಿ: ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರ ನಿಧನದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಗೃಹಸಚಿವಾಲಯ ತಿಳಿಸಿದೆ.ಬ್ರಿಟನ್ ರಾಣಿ ನಿಧನಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂದತೆ ಗಣ್ಯ ವ್ಯಕ್ತಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನಕ್ಕೆ ಗೌರವಾರ್ಥವಾಗಿ ಸೆಪ್ಟೆಂಬರ್ 11ರಂದು (ಭಾನುವಾರ) ಭಾರತದಲ್ಲಿ 1 ದಿನದ ಶೋಕಾಚರಣೆ ನಡೆಸಲಾಗುತ್ತಿದೆ.
ಬ್ರಿಟಿಷ್ ಇತಿಹಾಸದಲ್ಲಿಯೇ ಸುದೀರ್ಘ ಕಾಲ ರಾಣಿಯಾಗಿದ್ದ ಹಿರಿಮೆ 2ನೇ ಎಲಿಜಬೆತ್ ಅವರಿಗಿದ್ದು, ಸೆ. 8 ರಂದು ರಾತ್ರಿ ತಮ್ಮ 96ನೇ ವಯಸ್ಸಿನಲ್ಲಿ ನಿಧನರಾದರು. ರಾಣಿಗೆ ಗೌರವಾರ್ಥವಾಗಿ ಬ್ರಿಟನ್ ನಲ್ಲಿ 10 ದಿನಗಳ ರಾಷ್ಟ್ರೀಯ ಶೋಕವನ್ನು ಘೋಷಿಸಲಾಗಿದೆ.
PublicNext
09/09/2022 07:11 pm