ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರೀಯ ಉದ್ಯಾನವನಕ್ಕೆ 8 ಚಿರತೆಗಳ ಎಂಟ್ರಿ

ಭೋಪಾಲ್: : ಆಫ್ರಿಕಾದ ನಮೀಬಿಯಾದಿಂದ ತರಲಾದ ಎಂಟು ಚಿರತೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದರು.ಕಳೆದ 7 ದಶಕಗಳ ಹಿಂದೆ ಭಾರತದಲ್ಲಿ ನಶಿಸಿ ಹೋಗಿದ್ದ ಚೀತಾಗಳನ್ನು ಶನಿವಾರ ನಮೀಬಿಯಾದಿಂದ ಭಾರತಕ್ಕೆ ತರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 72ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದರೊಂದಿಗೆ 8 ಚೀತಾಗಳನ್ನು ಮಧ್ಯಪ್ರದೇಶದ ಕುನ್ಹೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆ ಮಾಡಿದ್ದಾರೆ.

ಮಚ್ಚೆ ಗುರುತಿನ ಚೀತಾಗಳ ಸಂತತಿ ಭಾರತದಲ್ಲಿ 70 ವರ್ಷ ಹಿಂದೆಯೇ ನಾಶವಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 1952ರಲ್ಲಿ ಈ ಪ್ರಭೇದ ಭಾರತದಲ್ಲಿ ಇಲ್ಲ ಎಂದು ಘೋಷಣೆ ಮಾಡಲಾಗಿತ್ತು.ಇದೀಗ 75 ವರ್ಷಗಳ ಬಳಿಕ ಭಾರತಕ್ಕೆ ಚೀತಾಗಳು ಬಂದಿವೆ. ಈ ಚೀತಾಗಳಿಗೆ ಕುನ್ಹೋ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ.

Edited By : Nirmala Aralikatti
PublicNext

PublicNext

17/09/2022 01:52 pm

Cinque Terre

89.95 K

Cinque Terre

2

ಸಂಬಂಧಿತ ಸುದ್ದಿ