ರಾಜ್ಯದ ಎರಡು ಪ್ರಮುಖ ರೈಲುಗಳ ಹೆಸರನ್ನು ಸರ್ಕಾರ ಬದಲಾಯಿಸಿದೆ. ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ‘ಟಿಪ್ಪು ಎಕ್ಸ್‌ಪ್ರೆಸ್’ ರೈಲಿಗೆ “ಒಡೆಯರ್ ಎಕ್ಸ್‌ಪ್ರೆಸ್” ಹಾಗೆ ಮೈಸೂರು-ತಾಳಗುಪ್ಪ ನಡುವೆ ಓಡಾಡುವ ರೈಲಿಗೆ “ಕುವೆಂಪು ಎಕ್ಸ್‌ಪ್ರೆಸ್” ಎಂದು ಹೆಸರಿಡಲಾಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ಹಲವು ದಿನಗಳಿಂದ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರು ಬದಲಿಸಿ ಎಂಬ ಒತ್ತಾಯ ಕೇಳಿ ಬಂದಿತ್ತು. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಅಪಾರ. ಹೀಗಾಗಿ ಒಡೆಯರ್ ಎಕ್ಸ್ ಪ್ರೆಸ್ ಎಂದು ಹೆಸರಿಡಬೇಕು ಎಂದು ಒತ್ತಾಯಿಸಿದ್ದರು.
ಸದ್ಯ ಟಿಪ್ಪು ಎಕ್ಸ್‌ಪ್ರೆಸ್ ರೈಲಿನ ಹೆಸರು ಬದಲಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಆದೇಶ ಪ್ರತಿಯಲ್ಲಿ ಟಿಪ್ಪು ಎಕ್ಸ್‌ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ಎಂದು ನಾಮಕರಣ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.
PublicNext
07/10/2022 08:01 pm