ನವದೆಹಲಿ: ಈ ಸಲದ ದೀಪಾವಳಿ ಹಬ್ಬಕ್ಕೆ ರೈಲ್ವೇ ಇಲಾಖೆಯು ತನ್ನ ಉದ್ಯೋಗಿಗಳಿಗೆ ಬಂಪರ್ ಕೊಡುಗೆ ನೀಡುತ್ತಿದೆ. 11 ಲಕ್ಷ ಉದ್ಯೋಗಿಗಳಿಗೆ 78 ದಿನದ ಬೋನಸ್ ನೀಡುವುದಾಗಿ ಇಲಾಖೆ ಘೋಷಿಸಿದೆ. ಕೇಂದ್ರ ಸರಕಾರದ ಈ ನಿರ್ಧಾರದಿಂದ ರೈಲ್ವೆಗೆ 2000 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ. ಇನ್ನೂ, ತೈಲ ಕಂಪನಿಗಳಿಗೆ 22 ಸಾವಿರ ಕೋಟಿ ಪರಿಹಾರ ನೀಡಲಾಗುತ್ತದೆ ಎಂದು ಸಂಪುಟ ಸಭೆ ಬಳಿಕ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.
ಇನ್ನೂ ಕಳೆದ ಎರಡು ವರ್ಷಗಳಲ್ಲಿ ಗೃಹಬಳಕೆಯ ಅಡುಗೆ ಅನಿಲ ಎಲ್ಪಿಜಿಯನ್ನು ವೆಚ್ಚಕ್ಕಿಂತ ಕಡಿಮೆ ಬೆಲೆಗೆ ಮಾರಾಟ ಮಾಡುವುದರಿಂದ ಉಂಟಾದ ನಷ್ಟವನ್ನು ಸರಿದೂಗಿಸಲು ಅವರು ಸರ್ಕಾರಿ ಸ್ವಾಮ್ಯದ ಮೂರು ಇಂಧನ ಚಿಲ್ಲರೆ ವ್ಯಾಪಾರಿಗಳಿಗೆ 22,000 ಕೋಟಿ ರೂ.ಗಳ ಒಂದು ಬಾರಿಯ ಅನುದಾನವನ್ನು ವಿಸ್ತರಿಸಲಿಲಾಗುತ್ತದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಬುಧವಾರ ತಿಳಿಸಿದ್ದಾರೆ.
PublicNext
12/10/2022 05:59 pm