ಕಲಬುರಗಿ: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ನಗರದ ತಾವರಗೇರ ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಆರೋಪಿ ಸುಪ್ರೀತ್ ನವಲೇ (32) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮಾದಕ ವಸ್ತು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಇಂದು ಬೆಳಗ್ಗೆ ಪೊಲೀಸರು ತಾವರಗೇರ ಕ್ರಾಸ್ ಸಮೀಪ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಶಂಕಿತ ಕಾರೊಂದನ್ನು ತಪಾಸಣೆ ಮಾಡುತ್ತಿದ್ದ ವೇಳೆ ಅದರಲ್ಲಿದ್ದ ಆರೋಪಿ ಸುಪ್ರೀತ್ ಪೊಲೀಸರ ಮೇಲೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.
ಆಗ ಚೌಕ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್ ರಾಘವೇಂದ್ರ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಗುರುಮೂರ್ತಿಯವರ ಎಡಗೈಗೆ ಗಾಯವಾಗಿದೆ. ಗುರುಮೂರ್ತಿ ಹಾಗೂ ಆರೋಪಿಯನ್ನು ನಗರದ ಜಿಮ್ಸ್ ಟ್ರಾಮಾ ಕೇರ್ ಸೆಂಟರ್‌ಗೆ ದಾಖಲು ಮಾಡಲಾಗಿದೆ.
ಈಗಾಗಲೇ ಸುಪ್ರೀತ್ ಮೇಲೆ ಕಲಬುರಗಿ, ಹೈದರಾಬಾದ್‌ನಲ್ಲಿ ಕೇಸ್‌ಗಳಿದ್ದು, 2016 ರಿಂದಲೇ ಮಾದಕ ವಸ್ತುಗಳ ಸಾಗಾಟ ಮಾಡುತ್ತಿದ ಎಂದು ತಿಳಿದು ಬಂದಿದೆ. ಈ ಕುರಿತು ಸಬ್ ಅರ್ಬನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
PublicNext
11/01/2025 01:56 pm