ಕಲಬುರ್ಗಿ : ಹಳೇ ಜೇವರ್ಗಿ ರಸ್ತೆಯಲ್ಲಿರುವ ಪಿಎನ್ ಟಿ ಕ್ರಾಸ್ ಸಮೀಪ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನು ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಭಯಾನಕ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹೌದು ಭಾನುವಾರ ನಗರದ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿ ಜಮೀರ್ (23) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜಮೀರ್ ತನ್ನ ಬೈಕ್ ನಲ್ಲಿ ಹೊರಟಿದ್ದ ವೇಳೆ ಬೆನ್ನಟ್ಟಿದ ಇಬ್ಬರು ಹಂತಕರು ಜೀವನಪ್ರಕಾಶ ಶಾಲೆ ಬಳಿ ಅಡ್ಡಗಟ್ಟಿ ನೋಡನೋಡುತ್ತಿದ್ದಂತೆ ಮಾರಕಾಸ್ತ್ರಗಳಿಂದ ಹತ್ತಾರು ಬಾರಿ ಕೊಚ್ಚಿ ಪರಾರಿಯಾಗಿದ್ದರು.
ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
PublicNext
19/09/2022 09:59 pm