ಕಲಬುರಗಿ: ಯಾದಗಿರಿ, ವಿಜಯಪುರ, ಕಲಬುರಗಿ ಮೂರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡನನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ ಆದೇಶ ಹೊರಡಿಸಿದ್ದಾರೆ.
ಅಕ್ರಮ ಪಡಿತರ ಅಕ್ಕಿ ಸಾಗಾಟ, ಜೀವ ಬೇದರಿಕೆ ಹಾಕಿರೋದು ಸೇರಿದಂತೆ ಮೂರು ಜಿಲ್ಲೆಯ ಹಲವಡೆ ವಿವಿಧ ಪ್ರಕರಣಗಳನ್ನು ಮಣಿಕಂಠ ರಾಠೋಡ ಎದುರಿಸುತ್ತಿದ್ದಾರೆ. ಕೋರ್ಟ್‌ನಲ್ಲಿ ಜಾಮೀನು ಪಡೆದು ಹೊರಬಂದ ನಂತರವು ಮತ್ತೆ ಹಳೆ ಕಾಯಕ ಮುಂದುವರೆಸಿದ್ದು, ಇವರನ್ನು ಗಡಿಪಾರು ಮಾಡಬೇಕೆಂದು ಹಲವು ದಿನಗಳಿಂದ ಸಂಘಟನೆಗಳು ಆಗ್ರಹಿಸಿದ್ದರು.
ಇತ್ತಿಚ್ಚೆಗೆ ಎಡಿಜಿಪಿ ಅಲೋಕ್ಕುಮಾರ ಕಲಬುರಗಿ ನಗರಕ್ಕೆ ಆಗಮಿಸಿದಾಗ ದಲಿತ ಸಂಘಟನೆ ಮುಖಂಡರು ಮಣಿಕಂಠ ರಾಠೋಡ ಗಡಿಪಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು.
Kshetra Samachara
03/10/2022 04:28 pm