ಕಲಬುರಗಿ: ನೀರು ತರಲು ಹೋದ ಯುವತಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ
ಗಂಗಮ್ಮ 20 ಮೃತಪಟ್ಟ ಯುವತಿಯಾಗಿದ್ದಾಳೆ.
ಗಂಗಮ್ಮ ಅಂಬೇಡ್ಕರ್ ಆಶ್ರಯ ಕಾಲೋನಿ ನಿವಾಸಿಯಾಗಿದ್ದು, ನೀರು ತರಲು ಪಿಲ್ಟರ್ ಬೇಡ್ ನಲ್ಲಿ ಇರುವ ನೀರು ಶುದ್ಧೀಕರಣ ಘಟಕಕ್ಕೆ ತೆರಳಿದ್ದು, ಸಾಯಂಕಾಲವಾದರು ಮರಳಿ ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ನೀರು ಶುದ್ಧೀಕರಣ ಘಟಕಕ್ಕೆ ಬಂದು ನೋಡಿದಾಗ ಯುವತಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಚೌಕ್ ಪೋಲಿಸ್ ಠಾಣೆಯ ಸಿಬ್ಬಂದಿ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
PublicNext
07/10/2022 11:37 am