ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ತಲೆ ಮೇಲೆ ಕಲ್ಲು ಹಾಕಿ ಯುವಕನ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕೊಟಗಾ ಗ್ರಾಮದಲ್ಲಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಯುವಕನೋರ್ವನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.ಹತ್ಯೆಯಾದ ಯುವಕ ಚಂದನಕೇರಾ ಗ್ರಾಮದ ಮೋಹನ(21) ಎಂದು ತಿಳಿದು ಬಂದಿದೆ.

ಕುಡಿದ ಮತ್ತಿನಲ್ಲಿ ಸ್ನೇಹಿತರೆ ಕೊಲೆಮಾಡಿದ್ದಾರೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಆರೋಪಿಗಳಾದ ಭೀಮು ಮತ್ತು ಆನಂದ ಸೇರಿಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ವ್ಯಕ್ತಿಗಳನ್ನು ರಟಗಲ್ ಪೋಲಿಸರು ವಶಕ್ಕೆ ಪಡೆದಿದ್ದಾರೆ ಈ ಕುರಿತು ರಟಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Edited By : Nagaraj Tulugeri
PublicNext

PublicNext

09/10/2022 03:06 pm

Cinque Terre

16.41 K

Cinque Terre

1