ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ : ಬೀದರ್‌, ಮಂಗಳೂರಿನಲ್ಲಿ ಬ್ಯಾಂಕ್‌ ದರೋಡೆ ಬೆನ್ನಲ್ಲೇ ಎಚ್ಚತ್ತು ಸೂಕ್ತ ಕ್ರಮಕ್ಕೆ ಮುಂದಾದ ಪೊಲೀಸರು

ಕಲಬುರಗಿ : ಇಲ್ಲಿನ ಪೊಲೀಸ್ ಭವನದಲ್ಲಿ ಕಲಬುರಗಿ ನಗರದ ಬ್ಯಾಂಕ್ ಮ್ಯಾನೇಜರ್ ಮತ್ತು ಹಣಕಾಸು ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರು ಬ್ಯಾಂಕ್ ಮತ್ತು ಎ.ಟಿ.ಎಂ ಗಳಿಗೆ ನುರಿತ ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಂತೆ ಸೂಚನೆ ನೀಡಿದರು.

ಇತ್ತೀಚೆಗೆ ಬ್ಯಾಂಕ್, ಎ.ಟಿ.ಎಂ. ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರದ ಎಲ್ಲಾ ಬ್ಯಾಂಕ್, ಕೋ-ಆಪರೇಟಿವ್ ಸೊಸೈಟಿ ಹಾಗೂ ವಿವಿಧ ಹಣಕಾಸು ಸಂಸ್ಥೆಗಳ ವ್ಯವಸ್ಥಾಪಕರ ಸಭೆ ನಡೆಸಿದ ಅವರು ಬ್ಯಾಂಕ್ ಮತ್ತು ಎ.ಟಿ.ಎಮ್ ಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ, ಬಲ್ಗರಿ ಅಲಾರ್ಮ್, ಮೋಷನ್ ಡಿಟೆಕ್ಟರ್ ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಮತ್ತು ಬ್ಯಾಂಕನಿಂದ ಎ.ಟಿ.ಎಂಗಳಿಗೆ ಹಣವನ್ನು ಕಳುಹಿಸುವಾಗ ಕಡ್ಡಾಯವಾಗಿ ಆಯುಧದೊಂದಿಗೆ ನುರಿತ ಭದ್ರತಾ ಸಿಬ್ಬಂದಿಯನ್ನು ಕಳುಹಿಸುವಂತೆ ಸೂಚಿಸಿದರು.

Edited By : PublicNext Desk
PublicNext

PublicNext

20/01/2025 06:52 pm

Cinque Terre

20 K

Cinque Terre

0