ಕಲಬುರಗಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮ ದಿನದ ಅಂಗವಾಗಿ ರವಿವಾರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಅವರು ಪೊರಕೆ ಹಿಡಿದು ಕಸಗೂಡಿಸುವ ಮೂಲಕ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಂತರ ಕಚೇರಿಯಲ್ಲಿ ವಿಶ್ವಶಾಂತಿಯ ದೂತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಪೂರ್ವಕ ನಮನ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ತ್ಯಜಿಸುವ ಕುರಿತಂತೆ ಪ್ರತಿಜ್ಞೆ ವಿಧಿ ಬೋಧಿಸಲಾಯಿತು.
PublicNext
02/10/2022 03:42 pm