ಕಲಬುರಗಿ: ಬೀದರ್ ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಇಂದು ಬಿಜೆಪಿಯಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರ ಮನೆಯ ಮುಂದೆ ಬೃಹತ್ ಪ್ರತಿಭಟನೆ ಮಾಡಲಾಗುವುದು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು, ನಗರದ ಜಗತ್ ವೃತ್ತದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಮೃತರ ಕುಟುಂಬಕ್ಕೆ ಒಂದು ಕೋಟಿ ಪರಿಹಾರ ನೀಡುವಂತೆ ಒತ್ತಾಯಿಸಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ನೀಡುವಂತೆ ಪಟ್ಟು ಹಿಡಿಯಲಾಗಿದೆ.
PublicNext
04/01/2025 12:43 pm