ಕಲಬುರಗಿ: ಜಿಲ್ಲೆಯಾದ್ಯಂತ ತೇವಾಂಶ ಕೊರತೆಯಿಂದ ಹಾಳಾದ ತೊಗರಿ ಬೆಳೆಗೆ ಪರಿಹಾರ ನೀಡಬೇಕು ಹಾಗೂ ತೊಗರಿ ಗೆ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ತೊಗರಿ ಬೆಳೆ ಸುರಿದು ರೈತರಿಂದ ಪ್ರತಿಭಟನೆ ಮಾಡಲಾಯಿತು.
ನಂತರ ಮಾತನಾಡಿದ ಶರಣಬಸಪ್ಪ ಮಮಶೆಟ್ಟಿ ಅವರು ಕಲಬುರಗಿ ಜಿಲ್ಲೆಯಲ್ಲಿ ತೊಗರಿ ಹೆಚ್ಚು ಬಿತ್ತಿದ್ದು ಅದರಲ್ಲಿ ಎರಡು ಲಕ್ಷ ಹೆಕ್ಟೇರ್ ತೊಗರಿ ಒಣಗಿ ಹೋಗಿದೆ, ಹಾಗಾಗಿ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಾಗಿದೆ. ಕೂಡಲೇ ಸರ್ಕಾರ ರೈತರಿಗೆ ತೊಗರಿ ಗೆ ಬೆಂಬಲ ಬೆಲೆ ನೀಡಿ 1000 ರೂಪಾಯಿ ಪ್ರೋತ್ಸಾಹ ಧನ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು
Kshetra Samachara
18/01/2025 09:43 pm