ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನಾಂಬೆ ದರ್ಶನ ಮುಗಿಸಿ ಹೋಗುತ್ತಿದ್ದಾಗ ಕಾರು ಡಿಕ್ಕಿ, ತಂದೆ – ಮಗಳ ದುರ್ಮರಣ

ಹಾಸನ : ಹಾಸನಾಂಬೆ ದೇವಿ ದರ್ಶನ ಮುಗಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂದೇ ಕುಟುಂಬದ ಮೂವರಿಗೆ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ತಂದೆ, ಮಗಳು ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ. ಹಾಸನ ನಗರದ ತಣ್ಣೀರಹಳ್ಳ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.

ಕುಮಾರ್(38), ಕಾವ್ಯ(12) ಮೃತ ದುರ್ದೈವಿಗಳು. ಗುರುವಾರ ರಾತ್ರಿ ಪತ್ನಿ ಪುಟ್ಟಮ್ಮ, ಮಗಳು ಕಾವ್ಯ ಜೊತೆ ಕುಮಾರ್ ಹಾಸನಾಂಬೆ ದೇವಿ ದರ್ಶನಕ್ಕೆ ಹೋಗಿದ್ದರು. ದೇವಿ ದರ್ಶನ ಪಡೆದು ವಿಜಯನಗರದಲ್ಲಿರುವ ಸಂಬಂಧಿಕರ ಮನೆಗೆ ಮೂವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರೊಂದು ಮೂವರಿಗೂ ಡಿಕ್ಕಿ ಹೊಡೆದಿದೆ.

ಕುಮಾರ್ ಹಾಗೂ ಕಾವ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಪುಟ್ಟಮ್ಮನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫೋಟೋಗ್ರಾಫರ್ ಶಶಾಂಕ್ ಅಪಘಾತ ಮಾಡಿದ ಕಾರು ಚಾಲಕ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Manjunath H D
PublicNext

PublicNext

01/11/2024 10:13 pm

Cinque Terre

35.09 K

Cinque Terre

2

ಸಂಬಂಧಿತ ಸುದ್ದಿ