ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ

ಅರಕಲಗೂಡು : ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೋಬಳಿಯ ಕಂಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಕೆ.ಡಿ. ರವಿ (50) ಮೃತರು.

ವಿವಿಧ ಸಂಘ, ಮೈಕ್ರೋ ಫೈನಾನ್ಸ್ ಗಳಲ್ಲಿ ಒಟ್ಟು 9 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲ ಪಾವತಿಸುವಂತೆ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದಾರೆ. ರಾಜಸ್ವ ನಿರೀಕ್ಷಕ ಕುಮಾರ, ಗ್ರಾಮ ಲೆಕ್ಕಿಗ ಮದನ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಪತ್ನಿ ಇದ್ದಾರೆ.ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
PublicNext

PublicNext

03/02/2025 02:31 pm

Cinque Terre

11.63 K

Cinque Terre

0

ಸಂಬಂಧಿತ ಸುದ್ದಿ