ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನಾಂಬೆ ಮತ್ತು ಸಿದ್ದೇಶ್ವರ ಜಾತ್ರೆಗೆ ಅಗತ್ಯ ಸಿದ್ಧತೆಗೆ ಸಚಿವ ಗೋಪಾಲಯ್ಯ ಸೂಚನೆ

ಹಾಸನ: ಪ್ರಸಿದ್ಧ ಹಾಸನಾಂಬೆ ಮತ್ತು ಸಿದ್ಧೇಶ್ವರ ಜಾತ್ರೆಯನ್ನು ಅಧ್ದೂರಿಯಾಗಿ ನಡೆಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಅಬಕಾರಿ ಸಚಿವ ಕೆ. ಗೋಪಾಲಯ್ಯ ಅಧ್ಯಕ್ಷತೆಯಲ್ಲಿಂದು ಪೂರ್ವ ಭಾವಿ ಸಭೆ ನಡೆಯಿತು.

ಜಿಲ್ಲಾಧಿಕಾರಿಗಳ‌ ಕಚೇರಿಯಲ್ಲಿಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಯಶಸ್ವಿ ಜಾತ್ರೆ ನಡೆಸಲು ಹಲವು ಸಲಹೆ ಸೂಚನೆ ನೀಡಿದರು.

ಭಕ್ತಾದಿಗಳು ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ವಿಶೇಷ ಗಮನ ಹರಿಸಬೇಕು. ಮುಂದಿನ ಮೂರ್ನಾಲ್ಕು ದಿನ ಮಳೆ ಮುನ್ನೂಚನೆ ಇರುವುದರಿಂದ ಬದಲಿ ಜಾಗಗಳನ್ನು ಗುರುತಿಸಿ ವಾಹನ ವ್ಯವಸ್ಥೆ ಮಾಡಿ ಎಂದು ತಾಕೀತು ಮಾಡಿದರು.

ಭಕ್ತರು ಹೆಚ್ಚಾಗುವ ನಿರೀಕ್ಷೆ ಹೆಚ್ಚಾಗಿದೆ ಅದಕ್ಕೆ ಈಗಲೇ ಎಲ್ಲಾ ಮುಂಜಾಗ್ರತಾ ಕ್ರಮ ವಹಿಸಿ, ಸ್ವಚ್ಚತೆ ಶೌಚಾಲಯಗಳ ವ್ಯವಸ್ಥೆ ಬಗ್ಗೆ ವಿಶೇಷ ಗಮನ ಹರಿಸಬೇಕಿದೆ. ಜನರಿಗೆ ಸರದಿ ಸಾಲಿನಲ್ಲಿ ನಿಲ್ಲುವಾಗ ನೆರಳಿನ ವ್ಯವಸ್ಥೆ ಮಾಡಬೇಕು ಕುಡಿಯುವ ನೀರಿನ ಪೂರೈಕೆ, ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಬಾಲಕೃಷ್ಣ ಜಿಲ್ಲಾಧಿಕಾರಿ ಅರ್ಚನ ಎಂ.ಎಸ್. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜು ಹಾಸನಾಂಬ ಮತ್ತು ಸಿದ್ದೇಶ್ವರ ದೇವಾಲಯದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಬಿ.ಎ ಜಗದೀಶ್, ನಗರಸಭೆ ಅಧ್ಯಕ್ಷ ಮೋಹನ್, ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಡಿ.ವೈ,ಎಸ್.ಪಿ ಉದಯ್ ಭಾಸ್ಕರ್, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಸ್ವಾಮಿ, ನಗರಸಭೆ ಪೌರಾಯುಕ್ತ ಪರಮೇಶ್ವರಪ್ಪ, ತಹಶೀಲ್ದಾರ್ ನಟೇಶ್ ಹಾಗೂ ಮತ್ತಿತರರು ಹಾಜರಿದ್ದರು.

Edited By : Nagesh Gaonkar
PublicNext

PublicNext

10/10/2022 07:58 pm

Cinque Terre

39.75 K

Cinque Terre

0