ಹಾಸನ : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಎನ್.ಆರ್. ವೃತ್ತದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವೇಗವಾಗಿ ಬಂದ ಕಾರು ನಿಯಂತ್ರಣ ಸಿಗದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಡಿಕ್ಕಿ ರಭಸಕ್ಕೆ ವಿದ್ಯುತ್ ಕಂಬ ಬೀಳುವ ಸ್ಥಿತಿ ತಲುಪಿದ್ದು ಇದುವರೆಗೆ ಅದನ್ನು ಬದಲಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
04/02/2025 05:52 pm